ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ನಮ್ಮ ಸರ್ಕಾರ ರಕ್ಷಣೆ ನೀಡುವುದಿಲ್ಲ : ಕೆ.ಎಸ್. ಈಶ್ವರಪ್ಪ.

233
firstsuddi

ಹುಬ್ಬಳ್ಳಿ : ದೇಶದಲ್ಲಿ ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ಉಳಿಗಾಲವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ಸರ್ಕಾರದಿಂದ ರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ದೇಶದಲ್ಲಿತ್ತು. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ಗೂಂಡಾಗಳಿಗೆ ರಕ್ಷಣೆ ನೀಡುವುದಿಲ್ಲ ಎಂದರು. ಇದೇ ವೇಳೆ ನೆರೆ ಪರಿಹಾರ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಧಿಕಾರಿಗಳ ತಂಡವನ್ನು ಕಳುಹಿಸಿ ಸಮೀಕ್ಷೆ ನಡೆಸಿದ್ದು, ಶೀಘ್ರವೇ ಪರಿಹಾರ ಬಿಡುಗಡೆ ಆಗುತ್ತದೆ. ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಶೇ.99ರಷ್ಟು ವಿತರಣೆ ಮಾಡಲಾಗಿದೆ. ಮುಂದೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.