ಮಂಗಳೂರಿಗೆ ಆಗಮಿಸಿದ ಟಿಎಂಸಿ ನಾಯಕರು-ಮೃತರ ಕುಟುಂಬಕ್ಕೆ 5ಲಕ್ಷ ರೂ ಪರಿಹಾರ ವಿತರಣೆ…

147
firstsuddi

ಮಂಗಳೂರು : ಇಂದು ತೃಣಮೂಲಕ ಕಾಂಗ್ರೆಸ್ ನಿಯೋಗ ಮಂಗಳೂರಿಗೆ ಆಗಮಿಸಿದ್ದು, ಪೌರತ್ವ ತಿದ್ದುಪಡಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ 5ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದನ್ನು ವಿತರಣೆ ಮಾಡಲು ಕೇಂದ್ರದ ಮಾಜಿ ಸಚಿವ ದಿನೇಶ್ ತ್ರಿವೇದಿ ಹಾಗೂ ರಾಜ್ಯಸಭಾ ಸದಸ್ಯ ನದಿಮುಲ್ ಹಖ್ ಅವರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ತಲಾ 5ಲಕ್ಷ ರೂ ಚೆಕ್‍ನ್ನು ವಿತರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ತ್ರಿವೇದಿ ಅವರು ದೇಶದ ಎಲ್ಲೆಡೆ ಪೌರತ್ವ ತಿದ್ದುಪಡಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಎಲ್ಲೂ ಗೋಲಿಬಾರ್ ನಡೆದಿಲ್ಲ. ಆದರೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಘಟನೆ ಬಹಳ ಬೇಸರದ ಸಂಗತಿ. ಇದನ್ನು ನಾಗರೀಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಅಲ್ಲದೇ ನಿಮ್ಮ ಜೊತೆ ಮಮತಾ ಬ್ಯಾನರ್ಜಿ ಅವರು ಎಂದಿಗೂ ಇರುತ್ತಾರೆ. ಹೀಗಾಗಿ ಮಾನವೀಯತೆ ದೃಷ್ಠಿಯಿಂದ ಪರಿಹಾರವನ್ನು ನೀಡಲಾಗಿದೆ ಎಂದು ತಿಳಿಸಿದರು.