ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ, ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ ಗೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ.

41
firstsuddi

ಮೈಸೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ ಗೂ ಸಾಮ್ಯತೆ ಇಲ್ಲ. ಅದು ಕುಕ್ಕರನಲ್ಲಿ ಆದ ಬ್ಲಾಸ್ಟ್. ಆದರೆ ಇಲ್ಲಿ ಯಾವ ಕುಕ್ಕರ್ ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಸ್ಕ್ ಹಾಗೂ ಟೋಪಿ ಹಾಕಿಕೊಂಡು ಬಂದ ಒಬ್ಬ ವ್ಯಕ್ತಿ ಈ ಸ್ಫೋಟ ನಡೆಸಿದ್ದಾನೆ. ತಿಂಡಿಯ ಟೋಕನ್ ತೆಗೆದುಕೊಂಡು ಹೋಟೆಲ್ ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿ ನಂತರ ಹೋಗಿದ್ದಾನೆ. ಅವನು ಬಸ್ಸಿನಿಂದ ಇಳಿಯುವುದು ಹೋಟೆಲ್ ಗೆ ಬರುವುದು ಎಲ್ಲಾ ದೃಶ್ಯಾವಳಿಗಳು ಸಿಕ್ಕಿವೆ ಎಂದರು.

ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಒಬ್ಬ ವ್ಯಕ್ತಿಯ ಕೃತ್ಯವಾ? ಅಥವಾ ಸಂಘಟನೆಯ ಕೃತ್ಯವಾ ಎಂಬುದು ಗೊತ್ತಾಗಿಲ್ಲ. ಇದು ಭಯೋತ್ಪಾದಕ ಕೃತ್ಯನಾ ಎಂಬುದು ಕೂಡ ಸ್ಪಷ್ಟವಾಗಿಲ್ಲ. ಈ ಕುರಿತು ಎಲ್ಲವೂ ಇನ್ನೂ ತನಿಖೆಯ ಹಂತದಲ್ಲಿದೆ ಎಂದು ಹೇಳಿದರು

ನಾನು ಕೂಡ ಇಂದು ಘಟನಾ ಸ್ಥಳಕ್ಕೆ ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಲು ಹೋಗುತ್ತೇನೆ. ಒಟ್ಟು 9 ಜನರು ಗಾಯಳುಗಳಾಗಿದ್ದಾರೆ. 9 ಕ್ಕೆ 9 ಮಂದಿಯೂ ಪ್ರಾಣಾಪಾಪಾಯದಿಂದ ಪಾರಾಗಿದ್ದಾರೆ ಎಂದು ಸಿಎಂ ತಿಳಿಸಿದರು.