ಮಂಗಳೂರಿನ ಮಸಾಜ್ ಸೆಂಟರ್ ಮೇಲೆ ರಾಮ್ ಸೇನೆ ದಾಳಿ.

35

ಮಂಗಳೂರು: ಮಸಾಜ್ ಸೆಂಟರ್ ಒಂದರ ಮೇಲೆ ರಾಮ್ ಸೇನಾ  ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ 10 ಜನ ಕಾರ್ಯಕರ್ತರು ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 4 ಜನ ಯುವತಿಯರು ಹಾಗೂ ಒಬ್ಬ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‌ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ ಎಂದು ತಿಳಿಸಲಾಗಿದೆ.