ಮಂಗಳೂರಿನಲ್ಲಿ ಎಸ್‌ಡಿಪಿಐ, ನಿಷೇಧಿತ ಪಿಎಫ್ಐ ಕಾರ್ಯಕರ್ತರ ಮನೆ ಮೇಲೆ ದಾಳಿ – ಐವರು ಪೊಲೀಸ್ ವಶಕ್ಕೆ…

50
firstsuddi

ಮಂಗಳೂರು : ನಗರದಲ್ಲಿ ಎಸ್‌ಡಿಪಿಐ ಮತ್ತು ನಿಷೇಧಿತ ಪಿಎಫ್‍ಐ ಕಾರ್ಯಕರ್ತರ ಮನೆಗಳ ಮೇಲೆ ನಗರ ಪೊಲೀಸರು ಮತ್ತೆ ದಾಳಿ ಮಾಡಿ, ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದ ಪಣಂಬೂರು, ಸುರತ್ಕಲ್, ಉಳ್ಳಾಲ, ಮಂಗಳೂರು ಗ್ರಾಮಾಂತರ ಸೇರಿ ಎಂಟು ಕಡೆ ದಾಳಿ ನಡೆಸಲಾಗಿದೆ. ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯ ವೇಳೆ ಪಿಎಫ್ ಐನ ಐವರು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಪಿಎಫ್ ಐ ಕಾರ್ಯಕರ್ತರ ವಿರುದ್ಧ UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ.

ಇತ್ತೀಚೆಗೆ ಪಿಎಫ್ ಐ ಮತ್ತು ಎಸ್ ಡಿಪಿಐ ಕಚೇರಿ ಮತ್ತು ಮುಖಂಡರುಗಳ ಮೇಲೆ ಎನ್ಐಎ ಮತ್ತು ರಾಜ್ಯ ಪೊಲೀಸರು ದಾಳಿ ಮಾಡಿದ್ದರು. ಬಳಿಕ ಐದು ವರ್ಷಗಳ ಕಾಲ ದೇಶದಲ್ಲಿ ಪಿಎಫ್ಐ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಆದೇಶಿಸಿತ್ತು. ನಂತರ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹಾಗೂ ಕಚೇರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.