ಮಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್‍ನ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಕೊರೊನಾ ವಾರಿಯರ್ಸ್ ಅನ್ನು ಕೂಡಾ ಬೆಂಬಿಡದೆ ಕಾಡುತ್ತಿದೆ. ಮಂಗಳೂರಿನಲ್ಲಿ ಐದು ಮಂದಿ ಪಿಜಿ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಗರದ ಎರಡು ಸರ್ಕಾರಿ ಆಸ್ಪತ್ರೆಗಳ ಮೂವರು ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಹಾಗೂ ಈ ಐದು ಮಂದಿ ವೈದ್ಯರ ಸಂಪರ್ಕದಲ್ಲಿದ್ದ ಹಲವು ವೈದ್ಯರನ್ನು ಕ್ವಾರಂಟೈನ್ ಮಾಡಲಾಗಿದೆ.










