ಮಂಗಳೂರಿನಲ್ಲಿ ಗಾಂಜಾ ದಂಧೆ – ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ…

58
firstsuddi

ಮಂಗಳೂರು : ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಗಾಂಜಾ ಸೇವನೆ ಹಾಗೂ ಗಾಂಜಾ ಪೆಡ್ಲಿಂಗ್ ಪ್ರಕರಣದಲ್ಲಿ ಇಬ್ಬರು ವೈದ್ಯರು, ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನ ಭಾಗಿಯಾಗಿದ್ದಾರೆ.

ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28), ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ(22), ಡಾ. ಹೀರಾ ಬಸಿನ್(23), ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್ (34)ನನ್ನು ಬಂಧಿಸಲಾಗಿದೆ.

ಪ್ರಕರಣದ ಕುರಿತು ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದಾನೆ. ಆತನ ಬಳಿ 50 ಸಾವಿರ ಮೌಲ್ಯದ 2 ಕೆಜಿ ಗಾಂಜಾ, ಮೊಬೈಲ್ ಮತ್ತು ನಗದನ್ನು ಮತ್ತು ಆಟಿಕೆ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಆತನನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದರು.