ಮಂಗಳೂರಿನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ…

76
firstsuddi

ಮಂಗಳೂರು : ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.

ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್ ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು. ಸೆಪ್ಟೆಂಬರ್ 21ರಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್ ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು.

ವಿದ್ಯಾರ್ಥಿನಿಯರು ಮಂಗಳೂರಿನಿಂದ ರೈಲಿನ ಮೂಲಕ ಕೊಯಂಬತ್ತೂರು ತೆರಳಿದ್ದರು. ಕೊಯಂಬತ್ತೂರಿನಿಂದ ಬಸ್ ಮೂಲಕ ಪಾಂಡಿಚೇರಿಗೆ ಪ್ರಯಾಣ ಬೆಳಸಿ, ಮತ್ತೆ ಪಾಂಡಿಚೇರಿಯಿಂದ ವಾಪಸ್ ಚೆನೈಗೆ ಬಂದಿದ್ದರು. ಅಲ್ಲೇ ಸುತ್ತಾಡಿ ರಿಕ್ಷಾದಲ್ಲಿ ಚೆನ್ನೈ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಪೊಲೀಸರಿಗೆ ನಡೆದ ವಿಚಾರ ತಿಳಿಸಿದ್ದು, ಅವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇಂದು ಅವರನ್ನು ಮಂಗಳೂರಿಗೆ ಕರೆದುಕೊಂಡು ಬರಲಾಗಿದೆ.