ಮಂಗಳೂರು : ಅಪ್ರಾಪ್ತ ಮಕ್ಕಳ ಮಾರಾಟ ಮಾಡುತ್ತಿದ್ದ ಅರೋಪಿಯ ಬಂಧನ…

88
Firstsuddi

ಮಂಗಳೂರು : ಮೂರು – ನಾಲ್ಕು ತಿಂಗಳ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಲ್ಕಿ ನಿವಾಸಿ ರಾಯನ್ (30 ವರ್ಷ) ಎಂದು ಗುರುತಿಸಲಾಗಿದೆ.

ಮೂರು-ನಾಲ್ಕು ತಿಂಗಳ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿರುವ ಜಾಲದ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ರಾಯನ್ ನನ್ನು ಕದ್ರಿ ವ್ಯಾಪ್ತಿಯ ಡಿಂಕಿ ಡೈನ್ ಹೋಟೆಲ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆತನನ್ನು ವಿಚಾರಿಸಿ ಮಾರಾಟ ಮಾಡಿರುವ ಒಂದು ಮಗುವನ್ನು ವಶಕ್ಕೆ ಪಡೆದು ಸದ್ರಿ ಜಾಲದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಐ.ಪಿ.ಎಸ್ ಹಾಗೂ ಉಪ ಪೊಲೀಸ್ ಆಯುಕ್ತರುಗಳಾದ ಹರಿರಾಮ್ ಶಂಕರ್ ಐ.ಪಿ.ಎಸ್ ಮತ್ತು ವಿನಯ್ ಗಾಂವ್ಕರ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.