ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ…

117
firstsuddi

ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹಮದ್ ಕಲ್ಲಾರ್ ಎಂದು ಗುರುತಿಸಲಾಗಿದ್ದು, ಈತ ಸ್ಪೈಸ್ ಜೆಟ್ ವಿಮಾನದಲ್ಲಿ ಇಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

 ಒಳ ಉಡುಪಿನಲ್ಲಿ ಪೌಡರ್ ಹಾಗೂ ಕಚ್ಚಾ ಸರದ ರೂಪದಲ್ಲಿ ಸಾಗಾಟ ಮಾಡುತ್ತಿದ್ದ. 57,14,940 ರೂ. ಮೌಲ್ಯದ 1.23 ಕೆಜಿ ಚಿನ್ನ ವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.