ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತರಾಷ್ಡ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳದ ಕೊಪ್ಪ ಮೂಲದ ಮೊಹಮ್ಮದ್ ಖಾಲಿದ್ (45) ಬಂಧಿತ ವ್ಯಕ್ತಿ. ಈತನನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ಖಾಲಿದ್ ನಿಂದ 33,75,470 ರೂಪಾಯಿ ಮೌಲ್ಯದ 737 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.










