ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್‌ಗೆ ನಾಳೆ ಶಸ್ತ್ರಚಿಕಿತ್ಸೆ…

58
firstsuddi

ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್ ಗೆ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದೆ.

ಬಾಂಬ್ ಸ್ಫೋಟದ ತೀವ್ರತೆಗೆ ಶಾರೀಕ್ ನ ಎರಡು ಕೈ ಮತ್ತು ಎದೆ ಭಾಗದಲ್ಲಿ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಸರ್ಜನ್ ಕೆ.ಟಿ ರಮೇಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲು ಎನ್ ಐಎ ಮುಂದಾಗಿದೆ. ಚಿಕಿತ್ಸೆ ನಡೆದು 7 ದಿನದ ಬಳಿಕ ಶಾರೀಕ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದ್ದು, ನಂತರ ಹೆಚ್ಚಿನ ವಿಚಾರಣೆಯನ್ನು ಎನ್ ಐಎ ತಂಡ ನಡೆಸಲಿದೆ.

ಶಾರೀಕ್‍ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಡಿಸೆಂಬರ್ 16ರ ರಾತ್ರಿ ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು.