ಮಂಗಳೂರು ಜುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ – ಆರೋಪಿಯ ಬಂಧನ…

58
firstsuddi

ಮಂಗಳೂರು : ನಗರದ ಜುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( 33) ಬಂಧಿತ ಆರೋಪಿ. ಕೊಲೆ ನಡೆದ ತಿಂಗಳ ಬಳಿಕ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.

ಫೆ.3ರಂದು ಮಂಗಳೂರಿನ ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಸಿಬ್ಬಂದಿಯಾಗಿದ್ದ ರಾಘವೇಂದ್ರ ಆಚಾರ್ಯರವರನ್ನು(50) ಹಾಡಹಗಲೇ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಘಟನೆ ನಡೆದ ದಿನವೇ ಜ್ಯುವೆಲ್ಲರಿಯಲ್ಲಿದ್ದ ಚಿನ್ನಾಭರಣ ಕಳವು ಆಗಿದ್ದು, ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಆರೋಪಿಯನ್ನು ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಆರೋಪಿಯನ್ನು ಮಂಗಳೂರಿಗೆ ಕರೆತರಲಾಗಿದೆ.