ಮಂಗಳೂರು: ದುಷ್ಕರ್ಮಿಗಳಿಂದ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ…

157
firstsuddi

ಮಂಗಳೂರು: ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಅಡ್ಯಾರ್ ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಯಾಕೂಬ್ ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ನಿನ್ನೆ ತಡರಾತ್ರಿ ನಾಲ್ವರು ದುಷ್ಕರ್ಮಿಗಳು ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು, ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಯಾಕೂಬ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಶೋಧ ಕಾರ್ಯ ನಡೆದಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.