ಮಂಗಳೂರು : ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ…

117
firstsuddi

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 130ನೇ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಡಾ. ಕೆ.ವಿ. ರಾಜೇಂದ್ರ ಅವರಿಗೆ ಹೂಗುಚ್ಚ ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.