ಮಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ!

192
Firstsuddi

ಮಂಗಳೂರು : ವಿದ್ಯಾರ್ಥಿನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿರುವ ಘಟನೆ ಉಳ್ಳಾಲ ಸಮೀಪದ ಕುಂಪಲ ಆಶ್ರಯ ಕಾಲೋನಿಯಲ್ಲಿ ನಡೆದಿದೆ.

ಪ್ರೇಕ್ಷಾ(17) ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ. ಮಂಗಳೂರಿನ ಖಾಸಗಿ ಕಾಲೆಜೊಂದರಲ್ಲಿ ಓದುತ್ತಿದ್ದ ಪ್ರೇಕ್ಷಾ ಇವತ್ತು ರಜೆ ಪಡೆದುಕೊಂಡು ಮನೆಯಲ್ಲಿದ್ದಳು. ಈ ವೇಳೆ ಮನೆಗೆ ಮೂವರು ಬಂದು ಹೋಗಿದ್ದರು ಎನ್ನಲಾಗಿದೆ.

ಅಂಗನವಾಡಿ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನದ ವೇಳೆ ಊಟಕ್ಕೆಂದು ಮನೆಗೆ ಬಂದ ಸಂದರ್ಭದಲ್ಲಿ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಗಳ ಮೃತದೇಹ ಪತ್ತೆಯಾಗಿದೆ. ಸ್ಥಳಿಯರು ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.