ಮಂಗಳೂರು : ಬಸ್-ಲಾರಿ ಮಧ್ಯೆ ಡಿಕ್ಕಿ : ಚಾಲಕ ಸಜೀವ ದಹನ…

106
Firstsuddi
ಮಂಗಳೂರು : ಬಸ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಡಬ ತಾಲ್ಲೂಕಿನ ನೆಲ್ಯಾಡಿ ಬಳಿ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ನಡೆದಿದೆ.

 

ಮೃತ ಚಾಲಕನನ್ನು ಮೈಸೂರಿನ ಸಂತೋಷ್ (25) ಎಂದು ಗುರುತಿಸಲಾಗಿದೆ.

ನಿನ್ನೆ ತಡರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಗೂಡ್ಸ್ ಲಾರಿಗೆ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ ತಗುಲಿದೆ. ಘಟನೆಯಲ್ಲಿ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದ್ದು ಪ್ರಯಾಣಿಕರು ತಕ್ಷಣ ಬಸ್ ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿ ಚಾಲಕ ಹೊರಕ್ಕೆ ಬರಲಾಗದೆ ಮೃತಪಟ್ಟಿದ್ದಾನೆ. ಕಡಬ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.