ಮಂಗಳೂರು : ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ-ಬೈಕ್ ಸವಾರ ಸ್ಥಳದಲ್ಲೇ ಸಾವು…

136
firstsuddi

ಮಂಗಳೂರು : ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಸಂದೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಸಂದೇಶ್ ಪೂಜಾರಿ ಅವರು ಕಣೀರ್ ತೋಟದ ಜಾತ್ರೆ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.