ಮಂಗಳೂರು ಮಳಲಿ ಮಸೀದಿ ವಿವಾದ ; ಇಂದು ತಾಂಬೂಲ ಪ್ರಶ್ನೆ, ನಿಷೇಧಾಜ್ಞೆ ಜಾರಿ…

50
firstsuddi

ಮಂಗಳೂರು : ಮಂಗಳೂರು ಹೊರವಲಯದ ಮಳಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ಹಿಂದೂ ದೇಗುಲದ ಶೈಲಿಯ ಕುರುಹುಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆಯಲಿದೆ.

ಹಿಂದೂಪರ ಸಂಘಟನೆಗಳ ನೇತ್ರತ್ವದಲ್ಲಿ ವಿವಾದಿತ ಮಳಲಿ ದರ್ಗಾದ ಅನತಿ ದೂರದಲ್ಲೇ ಇಂದು ಬೆಳಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನೆ ನಡೆಯಲಿದೆ. ಮಳಲಿಯ ಮಸೀದಿಯ ಸಮೀಪದಲ್ಲಿರುವ ಶ್ರೀರಾಮಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದ್ದು, ಕೇರಳದ ಪುರೋಹಿತರು ತಾಂಬೂಲ ಪ್ರಶ್ನೆ ನಡೆಸುವರು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ವಾತಾವರಣ ನಿರ್ಮಾಣವಾಗದಿರಲು ಮಳಲಿ ಮಸೀದಿಯ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಏನಿದು ವಿವಾದ?
ಮಂಗಳೂರಿನ ಹೊರವಲಯದ ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನದ ಶೈಲಿ ಪತ್ತೆಯಾಗಿರೋ ಹಿನ್ನಲೆಯಲ್ಲಿ ಸಾಕಷ್ಟು ಚರ್ಚೆ ಆರಂಭಗೊಂಡಿದೆ. ಎಪ್ರಿಲ್ 21 ರಂದು ಈ ದರ್ಗಾವನ್ನು ನವೀಕರಣಗೊಳಿಸೋದಕ್ಕಾಗಿ ಎದುರಿನ ಭಾಗವನ್ನು ನೆಲ ಸಮಗೊಳಿಸಲಾಗಿತ್ತು. ಈ ವೇಳೆ ದರ್ಗಾದ ಒಳ ಭಾಗದಲ್ಲಿ ದೇವಸ್ಥಾನದಲ್ಲಿರುವಂತಹ ಗುಡಿಯ ಶೈಲಿ, ಕಂಬಗಳು, ತೋಮರ, ಬಾಗಿಲುಗಳು ಪತ್ತೆಯಾಗಿತ್ತು. ಹೀಗಾಗಿ ಇದು ಜೈನ ಅಥವಾ ಹಿಂದೂ ದೇವಸ್ಥಾನ ಆಗಿರೋ ಸಾಧ್ಯತೆ ಇದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲು ಏರಿತ್ತು.