ಮಂಗಳೂರು: ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ…

32
firstsuddi

ಮಂಗಳೂರು: ಕಿರಾತಕನೋರ್ವ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕೇರಳ ಮೂಲದ ಅಬೀನ್ ಎಂಬಾತ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ ಸಿ.ಬಿ, ಅರ್ಚನಾ ಹಾಗೂ ಅಮೃತ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಕಡಬ ಸರ್ಕಾರಿ ಶಾಲೆಯಲ್ಲಿ ಘಟನೆ ನಡದಿದ್ದು, ಆರೋಪಿ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿಕೊಂಡು ಬಂದು ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಯರ ಮೇಲೆ ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ್ದಾನೆ. ಇನ್ನೂ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ. ಹಾಗೂ ಆರೋಪಿ ಅಬೀನ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.