ಯುವತಿ ಹಾಗೂ ವ್ಯಕ್ತಿಯೊಬ್ಬರ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…

1382
firstsuddi

ಮಂಗಳೂರು : ಯುವತಿ ಹಾಗೂ ವ್ಯಕ್ತಿಯೊಬ್ಬರ ಅಶ್ಲೀಲ ವೀಡಿಯೋ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ವೀಡಿಯೋದಲ್ಲಿರುವ ವ್ಯಕ್ತಿಯೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಯುವತಿ ಹಾಗೂ ವ್ಯಕ್ತಿಯ ನಡುವೆ 6ತಿಂಗಳಿನಿಂದ ಪರಿಚಯವಿದ್ದು, ಇಬ್ಬರು ಒಪ್ಪಿಕೊಂಡು ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಈ ವೇಳೆ ಯುವತಿಯೇ ತನ್ನ ಮೊಬೈಲ್‍ನಲ್ಲಿ ವೀಡಿಯೋ ಮಾಡಿದ್ದು, ಈಗಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬಗ್ಗೆ ಯುವತಿಯನ್ನು ವಿಚಾರಿಸಿದಾಗ ನಾನು ಮೊಬೈಲ್ ರಿಪೇರಿಗೆ ಕೊಟ್ಟಿದ್ದೆ ಅವರು ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿರಬಹುದು ಎಂದು ಹೇಳಿದ್ದಾಳೆ.