ಮಂಗಳೂರು : ವಿದ್ಯಾರ್ಥಿ-ವಿದ್ಯಾರ್ಥಿನಿ ಮೇಲೆ ನೈತಿಕ ಪೊಲೀಸ್ ಗಿರಿ ; 6 ಮಂದಿ ಅರೆಸ್ಟ್…

62
firstsuddi

ಮಂಗಳೂರು : ನಗರದ ಸುರತ್ಕಲ್ ನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಹ್ಲಾದ್, ಪ್ರಶಾಂತ್, ಗುರು ಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿತ ಆರೋಪಿಗಳು. ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಸುರತ್ಕಲ್ ನ ಮುಕ್ಕ ಶ್ರೀನಿವಾಸ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿ ಮೊಹಮ್ಮದ್ ಯಾಸೀನ್ ತನ್ನ ಕಾಲೇಜು ಸಹಪಾಠಿ ವಿದ್ಯಾರ್ಥಿನಿಯನ್ನು ರಾತ್ರಿ 10 ಗಂಟೆಗೆ ಮುಕ್ಕದಿಂದ ಆಕೆಯ ಅಪಾರ್ಟ್ ಮೆಂಟ್ ಗೆ ಬೈಕ್ ನೆಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಯುವಕರ ಗುಂಪೊಂದು ಫಾಲೋ ಮಾಡಿದೆ. ಅಂತೆಯೇ ಜೋಡಿ ಸುರತ್ಕಲ್ ನ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್ಮೆಂಟ್ ಬಳಿ ಬರುತ್ತಿದ್ದಂತೆಯೇ ತಂಡ ಯುವಕನಿಗೆ ಥಳಿಸಿದೆ. ಇತ್ತ ಅನ್ಯಧರ್ಮಿಯ ಯುವಕನ ಜೊತೆ ಓಡಾಡುತ್ತೀಯ ಅಂತಾ ಯುವತಿಗೂ ಧಮ್ಕಿ ಹಾಕಿದ್ದಾರೆ. ಈ ಬಗ್ಗೆ ಯುವಕ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದನು.

ಘಟನೆ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.