ಮಂಗಳೂರು :ವಿಶ್ವ ಹಿಂದೂ ಪರಿಷತ್ ವತಿಯಿಂದ ನೂತನ ಕಮಿಷನರ್ ಭೇಟಿ.

145

ಮಂಗಳೂರು : ವಿಶ್ವ ಹಿಂದೂ ಪರಿಷತ್ ಮಂಗಳೂರು ವತಿಯಿಂದ ಮಂಗಳೂರು ಮಹಾನಗರದ ನೂತನ ಕಮಿಷನರ್ ಆಗಿ ನಿಯುಕ್ತಿಗೊಂಡ ಶಶಿಕುಮಾರ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ದಕ್ಷಿಣಕನ್ನಡ ಜಿಲ್ಲೆ ಸಹಿತ ಕರಾವಳಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾನೂನು ಬಾಹಿರ ಚಟುವಟಿಕೆಗಳಿಂದಾಗಿ ಅಶಾಂತಿಯ ಕಾರಣ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಅಕ್ರಮ ಗೋಹತ್ಯೆ, ಗೋಸಾಗಾಟ, ಸೆಕ್ಸ್ ಮಾಫಿಯಾ, ಭಯೋತ್ಫಾದಕ ಚಟುವಟಿಕೆಗಳು ಮತ್ತು ಇತರೆ ಕಾನೂನು ಬಾಹಿರ ಚಟುವಟಿಕೆಗಳಾದ ಅಕ್ರಮ ಮರಳು ಸಾಗಾಟ, ಜೂಜು, ಡ್ರಗ್ಸ್ ಮಾಫಿಯಾ ನಡೆದುಕೊಂಡು ಬರುತ್ತಾ ಇದ್ದು ಈ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ತಡೆದು ಜಿಲ್ಲೆಯಲ್ಲಿ ಸ್ವಸ್ಥ ಸಮಾಜ ತಮ್ಮ ಅಧಿಕಾರ ಅವಧಿಯಲ್ಲಿ ನಿರ್ಮಾಣವಾಗಲಿ ಎಂದು ಎಂದು ವಿನಂತಿಸಲಾಯಿತು.

ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಕಾರ್ಯಾಧ್ಯಕ್ಷರು ಪ್ರೊ ಎಂ ಬಿ ಪುರಾಣಿಕ್, ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಬಜರಂಗದಳ ವಿಭಾಗ ಸಂಚಾಲಕ್ ಭುಜಂಗ ಕುಲಾಲ್, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂಧರ್ಭದಲ್ಲಿ ಉಪಸ್ಥಿತಿ ಇದ್ದರು