ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ…

175
firstsuddi

ಮಂಗಳೂರು : ನಗರದ ರಾವ್ ವೃತ್ತದ ಬಳಿ ಇರುವ ಪೆಟ್ರೊಲ್ ಪಂಪ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಕೈಕಂಬ ನಿವಾಸಿ ಮಹಮ್ಮದ್ ಪೈರೋಜ್ (23) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 127 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನನ್ನು ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.