ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹಾಲಿನ ಕ್ಯಾಂಟರ್ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದ ಎದುರು ನಡೆದಿದೆ. ಕ್ಯಾಂಟರ್ ಲಾರಿ ಗೆಜ್ಜಲಗೆರೆ ಮನ್ಮುಲ್ ಘಟಕದ ಹಾಲಿನ ಉತ್ಪನ್ನಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮದ್ದೂರಿನ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಪಾದಚಾರಿಗಳ ಮೇಲೆ ಉರುಳಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನದ ಅಡಿ ಸಿಲುಕಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಮೇಲೆತ್ತಿ ರಕ್ಷಣೆ ಮಾಡಿದ್ದು, ಕ್ಯಾಂಟರ್ ನ ಅಡಿ ಸಿಲುಕಿದ ಶವವನ್ನು ತೆಗೆಯಲು ಹರಸಾಹಸ ಪಡುವಂತಾಗಿದ್ದು, ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.









