ಮಂಡ್ಯ : ಬೇಬಿ ಬೆಟ್ಟದಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

68
firstsuddi

ಮಂಡ್ಯ : ಕಳೆದ ಒಂದೂವರೆ ತಿಂಗಳಿನಿಂದ ಅಕ್ರಮ ಗಣಿಗಾರಿಕೆ ವಿವಾದ ರಾಜ್ಯ ಮಟ್ಟದಲ್ಲಿ ವ್ಯಾಪಕ ಸುದ್ದಿಯಾಗಿತ್ತು. ಇದೀಗ ಇದರ ಬೆನ್ನಲ್ಲೇ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟದ ನಿಷೇಧಿತ ಗಣಿ ಪ್ರದೇಶಗಳಲ್ಲಿ ಸ್ಫೋಟಕಗಳು ಪತ್ತೆಯಾಗಿವೆ.

ಬೇಬಿ ಬೆಟ್ಟದ ಸಿದ್ಧಲಿಂಗೇಶ್ವರ ಕ್ರಷರ್ ಸಮೀಪ ಸ್ಫೋಟಕ ವಸ್ತಗಳು ಪತ್ತೆಯಾಗಿವೆ. ಸ್ಫೋಟಕಗಳ ಬಗ್ಗೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪಾಂಡವಪುರ ಪೊಲೀಸರು 11 ಡಿಟೋನೇಟರ್, 20 ಜಿಲಿಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಜುಲೈ 16 ರಂದು ಕೆಆರ್ ಎಸ್ ಸರಹದ್ದಿನಲ್ಲೂ ಸಹ ಸ್ಫೋಟಕಗಳು ಪತ್ತೆಯಾಗಿದ್ದವು.

ಈ ಪ್ರದೇಶದಲ್ಲಿ ಬ್ಲಾಸ್ಟಿಂಗ್ ಮೂಲಕ ಗಣಿಗಾರಿಕೆ ಮಾಡುತ್ತಿಲ್ಲ ಎಂದು ಅಧಿಕಾರಿಗಳು ಹಾಗೂ ಗಣಿ ಮಾಲೀಕರು ಸ್ಪಷ್ಟನೆ ನೀಡಿದ್ದರು. ಆದರೆ ಇದೀಗ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಹಿನ್ನೆಲೆ ಹಲವು ಅನುಮಾನಗಳಿಗ ಕಾರಣವಾಗಿದೆ.