ಮಂಡ್ಯ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣ ಸಾವು…

88
firstsuddi

ಮಂಡ್ಯ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಸಮೀಪ ನಡೆದಿದೆ.

ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮ ಪಂಚಾಯತಿ ಅಧ್ಯಕ್ಷೆ, ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ(25), ಬಸಮ್ಮಣಿ ಅವರ ಮಕ್ಕಳಾದ 8 ವರ್ಷದ ಚಾಮುಂಡೇಶ್ವರಿ ಹಾಗೂ 2 ವರ್ಷದ ಗಂಡು ಮಗು ಮೃತ ದುರ್ದೈವಿಗಳು.

ಮುತ್ತಮ್ಮ ಮತ್ತು ಕುಟುಂಬದ ಸದಸ್ಯರು ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಆಟೋದಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಮಳವಳ್ಳಿಯಿಂದ ಮದ್ದೂರಿನತ್ತ ತೆರಳುತ್ತಿದ್ದ ಟಿಪ್ಪರ್ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿಯೇ ಮುತ್ತಮ್ಮ ಸೇರಿದಂತೆ ಮೂವರು ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.