ಮಂಡ್ಯ : ಮಂಡ್ಯದಲ್ಲಿ ಇಂದು ಕೂಡ ಐಟಿ ದಾಳಿ ಮುಂದುವರಿದಿದ್ದು, ಕಾಂಗ್ರೆಸ್ ನ ಮಾಜಿ ಶಾಸಕ, ಹಿರಿಯ ನಾಯಕ ಹಾಗೂ ಸದ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ.ಎಸ್. ಆತ್ಮಾನಂದ ಅವರ ಮನೆ ಮೇಲೆ ಐಟಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮನೆಯಲ್ಲಿರುವ ಎಲ್ಲರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.










