ಮಂತ್ರಿ ಮಂಡಲ ವಿಸ್ತರಣೆ ಮಾಡುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರ : ನಳಿನ್ ಕುಮಾರ್ ಕಟೀಲ್.

284
firstsuddi

ಶಿವಮೊಗ್ಗ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಮಂತ್ರಿ ಮಂಡಲ ವಿಸ್ತರಣೆ ಮಾಡುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರ. ಅವರು ಸಂಪುಟ ವಿಸ್ತರಣೆಯ ಬಗ್ಗೆ ಸೂಕ್ತ ಕಾಲದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಲಾಗುತ್ತದೆ. ಉಪಮುಖ್ಯಮಂತ್ರಿ ಹುದ್ದೆ ಹಂಚಿಕೆಯ ಬಗ್ಗೆಯೂ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಸೇರಿ ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗ ಎಂಬ ಭಿನ್ನಾಭಿಪ್ರಾಯಗಳು ಇಲ್ಲ. ಅವರು ಬಿಜೆಪಿಗೆ ಸೇರಿದ ಮೇಲೆ ಅವರೂ ನಮ್ಮವರೇ. ಎಲ್ಲರೂ ಒಟ್ಟಾಗಿ ಸೇರಿ ಉಪಚುನಾವಣೆ ನಡೆಸಿದ್ದರಿಂದ 12 ಸ್ಥಾನಗಳನ್ನು ಗೆದ್ದಿದ್ದೇವೆ. ರಾಮುಲು ಹಾಗೂ ರಮೇಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಎಲ್ಲೂ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಕಾಯ್ದೆಯಿಂದ ನಮ್ಮ ದೇಶದ ಅಲ್ಪ ಸಂಖ್ಯಾತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ದೇಶದಲ್ಲಿ ಈ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್ ಗಲಭೆ ಎಬ್ಬಿಸುತ್ತಿದೆ ಎಂದರು.