ಮಕ್ಕಳ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು : ಬೊಮ್ಮಯಿ.

54
firstsuddi

ಬೆಂಗಳೂರು : ಇಂದಿನಿಂದ ಪಿಯು ಹಾಗೂ ಪದವಿ ಕಾಲೇಜು ಆರಂಭ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು, ಮಕ್ಕಳ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.

ನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಿ, ಅಂತಿಮ ತೀರ್ಪಿಗೆ ಸಂಯಮದಿಂದ ಕಾಯಬೇಕು. ಶಾಲೆ, ಕಾಲೇಜುಗಳ ಆಡಳಿತ ಮಂಡಳಿ, ಪೋಷಕರು ಪರಸ್ಪರ ಗೊಂದಲ ಬಗೆಹರಿಸಿಕೊಂಡು ಸೌಹಾರ್ದ ವಾತಾವರಣ ನಿರ್ಮಿಸಬೇಕು. ಈ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಸದನದಲ್ಲಿ ಈಶ್ವರಪ್ಪ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಅದನ್ನು ಸದನದಲ್ಲೇ ಎದುರಿಸುತ್ತೇವೆ ಎಂದರು.