ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ- ಇಬ್ಬರ ಬಂಧನ…

45
firstsuddi

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚಾಲಯದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್ ಪರಾರಿ ಆಗಿದ್ದು, ಹುಡುಕಾಟ ನಡೆಸಲಾಗುತ್ತಿದೆ.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಘಟನೆ ಕುರಿತು ವಿಸ್ತೃತ ವರದಿ ಕೇಳಿದ್ದು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಮಾತನಾಡಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಜತೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.