ಮಕ್ಕಳು ವಿದ್ಯಾರ್ಥಿ ದೆಸೆಯಲ್ಲೇ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ಡಾ.ವಿಕ್ರಂ ಆಮಟೆ.

65
firstsuddi

ಚಿಕ್ಕಮಗಳೂರು: ಮಕ್ಕಳು ವಿದ್ಯಾರ್ಥಿ ದೆಸೆಯಲ್ಲೇ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಂ ಆಮಟೆ ಸಲಹೆ ಮಾಡಿದರು.

ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಯುವ ವಿಜ್ಞಾನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾವು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡರೆ ಸತ್ಯಾಸತ್ಯತೆಯನ್ನು ಅರಿಯಬಹುದು ವಿದ್ಯಾರ್ಥಿಗಳು ವಿಜ್ಞಾನಿಗಳಾಗಿ ರೂಪುಗೊಂಡರೆ ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.

ಸಮಾಜದ ಮತ್ತು ದೇಶದ ಅಭಿವೃದ್ಧಿ ದೃಷ್ಟಿಯಿಂದ ನಾವು ವೈಜ್ಞಾನಿಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ನಮ್ಮ ಮಕ್ಕಳನ್ನು ವಿಜ್ಞಾನಿಗಳನ್ನಾಗಿ ಮಾಡಬೇಕು ಎಂದು ಸಲಹೆ ಮಾಡಿದರು.

ಸಂಸ್ಥೆಯ ಉಪಾಧ್ಯಕ್ಷೆ ಎಸ್ ಶಾಂತಕುಮಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿಗಳಿಂದ ನಡೆದ ವಿಜ್ಞಾನ ಮಾದರಿಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು. ಕೃಷ್ಣಮೂರ್ತಿ ವೆಂಕಟೇಶ್ ವಿಜಯ್‍ಕುಮಾರ್ ಮಧುಮತಿ ಶಿವಪ್ರಸಾದ್ ಪ್ರಶಾಂತ್ ತೀರ್ಪುಗಾರರಾಗಿ ಭಾಗವಹಿಸಿದ್ದರು.

ಸಂಸ್ಥೆಯ ಖಜಾಂಚಿ ಎಂ.ಪಿ ಉಡುಪಿ ಸದಸ್ಯ ಎನ್.ಕೆ ಅಶ್ವಿನ್, ಪ್ರಾಂಶುಪಾಲ ಎನ್.ಆರ್ ಪವನ್‍ಕುಮಾರ್, ಶೃತಿ, ರಾಗಶ್ರೀ, ನವೀನ್ ಉಪಸ್ಥಿತರಿದ್ದರು.