ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ತಂದೆ ಅರೆಸ್ಟ್…

92
firstsuddi

ಮಂಗಳೂರು : ಮಗಳ ಮೇಲೆಯೇ ತಂದೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರದಲ್ಲಿ ನಡೆದಿದ್ದು, ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ.

ಬಂಧಿತ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದವಳು ಒಂದನೇ ತರಗತಿ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕದ್ರಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಕೂಡ ಆಗಿದ್ದಾನೆ.

ಮಗಳಿಗೆ ನೀಡುತ್ತಿದ್ದ ಲೈಂಗಿಕ ದೌರ್ಜನ್ಯ ತಡೆಯಲು ಬಂದ ಪತ್ನಿಯ ಮೇಲೂ ಈತ ಹಲ್ಲೆ ನಡೆಸಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.