ಮಗುವಿನೊಂದಿಗೆ ಆಸ್ಪತ್ರೆಗೆ ಹೊರಟ್ಟಿದ್ದ ಮಹಿಳೆಗೆ ಡ್ರಾಪ್ ನೀಡಿ ಮಾನವೀಯತೆ ಮೆರೆದ ಪೊಲೀಸರು..!

127
firstsuddi

ಹಾವೇರಿ : ಕೊರೊನಾ ನಿಯಂತ್ರಣ ಹಿನ್ನಲೆ ಜಿಲ್ಲೆಯಲ್ಲಿ ಎರಡನೇಯ ದಿನ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗಿದೆ. ಲಾಕ್ ಡೌನ್ ಆಗಿದ್ದರಿಂದ ವಾಹನಗಳ ಓಡಾಟಕ್ಕೆ ಅವಕಾಶ ಇರಲಿಲ್ಲ. ಹೀಗಾಗಿ ಮಹಿಳೆ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಹೊರಟ್ಟಿದ್ದರು. ಈ ವೇಳೆ ಮಹಿಳೆಗೆ ಡ್ರಾಪ್ ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಎರಡು ತಿಂಗಳ ಮಗುವನ್ನು ಎತ್ತಿಕೊಂಡು ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಸಹಾಯಕ್ಕೆ ಬಂದ ಪೊಲೀಸರು ತಮ್ಮ ವಾಹನದಲ್ಲಿ ತಾಯಿ ಹಾಗೂ ಮಗುವನ್ನು ಕರೆದೊಯ್ದು ಖಾಸಗಿ ಆಸ್ಪತ್ರೆಗೆ ಬಿಟ್ಟು ಮಾನವೀಯತೆ ಮೆರೆದಿದ್ದಾರೆ. ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.