ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಪಿಆರ್​ಓ ಸಾವು…

46
firstsuddi

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.

ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೇ ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟರು.

ಸುದ್ದಿ ತಿಳಿದು ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.