ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರುತ್ತೇವೆ : ಸಚಿವ ಸುನಿಲ್ ಕುಮಾರ್.

66
firstsuddi

ಬೆಳಗಾವಿ : ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರು ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಅದನ್ನು ಜಾರಿಗೆ ತಂದೆವು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ. ಮುಂದೆ ಲವ್ ಜಿಹಾದ್ ವಿರುದ್ಧವೂ ಕಾನೂನು ತರ್ತೀವಿ. ಮತಾಂತರವನ್ನು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ ಕೂಡ ವಿರೋಧಿಸಿದ್ದರು. ಈಗ ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಎಂಬುದನ್ನು ಹೇಳಲಿ. ಕೇವಲ ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಮತಾಂತರದಿಂದ ಆಗುತ್ತಿರುವ ದುಷ್ಪರಿಣಾಮಗಳು ಗೊತ್ತಿದೆ. ಈ ಬಗ್ಗೆ ಕಾಂಗ್ರೆಸ್ ನವರು ಚರ್ಚೆಗೆ ಬಂದರೆ, ನಾವು ಸಿದ್ಧವಿದ್ದೇವೆ ಎಂದು ಹೇಳಿದರು.