ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂದು ಯುವಕ ಆತ್ಮಹತ್ಯೆ!

67
firstsuddi

ಶಿವಮೊಗ್ಗ: ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಯನೂರು ಸಮೀಪದ ಕೋಟೆ ಗ್ರಾಮದಲ್ಲಿ ನಡೆದಿದೆ.

ಸ್ವಾಮಿನಾಥ್(32) ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವಾಮಿನಾಥ್‌ಗೆ ಎರಡು ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಹುಡುಗಿ ಈತನಿಗಿಂತ ಮೂರು ವರ್ಷ ದೊಡ್ಡವಳು ಎಂದು ಹೇಳಲಾಗಿದೆ. ಇದೇ ವಿಚಾರವಾಗಿ ಬೇಸರಗೊಂಡಿದ್ದ ಈತ ಮದುವೆ ಬೇಡವೆಂದು ಕುಟುಂಬದ ಸದಸ್ಯರು ಹಾಗೂ ಸ್ನೇಹಿತರ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ. ಇದು ಹುಡುಗಿ ಮನೆಯವರಿಗೆ ತಿಳಿದು ಸ್ವಾಮಿನಾಥನ ಮನೆಗೆ ಬಂದು ಗಲಾಟೆ ಮಾಡಿ ಮದುವೆ ಆಗುವಂತೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಸ್ವಾಮಿನಾಥ್ ಕಳೆನಾಶಕವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.