ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆಗೆ ಯತ್ನ…

64
firstsuddi

ಧಾರವಾಡ : ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.

ಸಂತೋಷ ಕೊರಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ. ವಯಸ್ಸಾದರೂ ನನಗೆ ಮದುವೆ ಆಗಿಲ್ಲ ಎಂದು ಮನನೊಂದ ಈತ ಸ್ಮಶಾನದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಯುಕನನ್ನು ಗಮನಿಸಿದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಸಂತೋಷ್ ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.