ಮದುವೆಯಾಗಿ ಆರು ವರ್ಷಗಳ ನಂತರ ತಾಯಿ ಆಗಲಿದ್ದಾರೆ ಶ್ರೇಯಾ ಘೋಷಲ್!

138
Firstsuddi

ಮುಂಬೈ : ಸುಮಧುರ ಕಂಠದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿರುವ ಗಾಯಕಿ ಶ್ರೇಯಾ ಘೋಷಾಲ್ ಅವರು ತಾಯಿ ಆಗುವ ಸಂಭ್ರಮದಲ್ಲಿದ್ದಾರೆ. ಬೇಬಿ ಬಂಪ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ಶ್ರೇಯಾ ಅವರು ತಾವು ಗರ್ಭಿಣಿಯಾಗಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

2015ರ ಫೆಬ್ರವರಿ ತಿಂಗಳಲ್ಲಿ ಶ್ರೇಯಾ ಅವರು ಶಿಲಾದಿತ್ಯ ಅವರನ್ನು ವಿವಾಹವಾಗಿದ್ದರು. ಇದೀಗ ಮದುವೆಯಾಗಿ 6 ವರ್ಷಗಳ ಬಳಿಕ ತಾಯಿ ಆಗುವ ಮೂಲಕ ಶ್ರೇಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಬೇಬಿ ಬಂಪ್ ನೊಂದಿಗೆ ಪೋಸ್ ನೀಡಿರುವ ಫೋಟೋವನ್ನು ಹಂಚಿಕೊಂಡಿರುವ ಶ್ರೇಯಾ ಘೋಷಾಲ್ ಅವರು “ಬೇಬಿ ಶ್ರೇಯಾ ಆದಿತ್ಯ ಬರುವವಳಿದ್ದಾಳೆ. ಈ ಸಂತೋಷದ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಥ್ರಿಲ್ ಎನ್ನಿಸುತ್ತಿದೆ. ಜೀವನದ ಹೊಸ ಹಂತಕ್ಕೆ ಕಾಲಿಡುತ್ತಿದ್ದೇವೆ. ನಮಗೆ ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಇರಲಿ”. ಎಂದು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.