ಮದ್ಯ ಸೇವಿಸಿ ತಾಯಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಮಗ…

38
firstsuddi

ರಾಯಚೂರು: ಗಾಂಜಾ, ಮದ್ಯ ಸೇವಿಸಿ ತಾಯಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ.

ಬಂಡಿ ತಿಮ್ಮಣ್ಣ (55) ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಶೀಲವಂತ ಎಂದು ಗುರುತಿಸಲಾಗಿದೆ. ಬಂಡಿ ತಿಮ್ಮಣ್ಣ ನಿತ್ಯ ಗಾಂಜಾ, ಮದ್ಯ ಸೇವಿಸಿ ತಾಯಿಗೆ ಕಿರುಕುಳ ನೀಡುತ್ತಿದ್ದ ಎಂದು ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ತಾನೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಕುಟುಂಬಸ್ಥರ ಎದುರೇ ತಂದೆಯನ್ನು ಕೊಂದು ತಪ್ಪಿಸಿಕೊಳ್ಳಲು ದಾರಿಯಿಲ್ಲದ ಹಿನ್ನೆಲೆ ಮಗ ಶೀಲವಂತ, ತಾನೇ ಪೊಲೀಸರಿಗೆ ಕರೆ ಮಾಡಿ, ಈ ಬಗ್ಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಲಿಂಗಸುಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.