ಮದ್ಯಪಾನ ತಡೆ ನೀತಿ ಕೋರಿ ಅರ್ಜಿ ಸಲ್ಲಿಕೆ – ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್.

57
firstsuddi

ನವದೆಹಲಿ : ರಾಷ್ಟ್ರೀಯ ಮಟ್ಟದಲ್ಲಿ ಮದ್ಯಪಾನ ತಡೆ ನೀತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು, ವಿನಿಯೋಗ್ ಪರಿವಾರ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಈ ಪ್ರಕರಣ ಆದಾಯದ ಅಂಶದಿಂದ ಕೂಡಿದೆ. ಕೆಲವು ಸಂದರ್ಭಗಳಲ್ಲಿ ನಾವು ಸೂಚನೆಗಳನ್ನು ನೀಡಿದರೆ ಅದು ರಾಜ್ಯ ಸರ್ಕಾರದ ಆದಾಯವನ್ನು ನಿರ್ಬಂಧಿಸಿದಂತಾಗಲಿದೆ. ನೀತಿ ರೂಪಿಸಲು ಸೂಚಿಸುವುದು ನಮ್ಮ ವ್ಯಾಪ್ತಿ ಅಲ್ಲ ಎಂದು ಪೀಠ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಣವ್ ಸಚ್ದೇವ ಅವರು, ಮದ್ಯಪಾನದ ಪ್ರಭಾವ ವಿಶೇಷವಾಗಿ ಸಮಾಜದ ಕೆಳಸ್ತರದ ಜನರ ಮೇಲೆ ವಿನಾಶಕಾರಿಯಾಗಿದ್ದು, ರಾಷ್ಟ್ರೀಯ ನೀತಿಯ ಕಾರ್ಯಸಾಧ್ಯತೆಯ ಬಗ್ಗೆ ನ್ಯಾಯಾಲಯವು ಕೇಂದ್ರದಿಂದ ವಿಚಾರಣೆ ನಡೆಸಬೇಕು ಎಂದು ಹೇಳಿದರು.

ಪೀಠವು ಈ ಬಗ್ಗೆ ಮಧ್ಯಪ್ರವೇಶ ಮಾಡುವುದಿಲ್ಲ. ಈ ರೀತಿಯ ವಿಷಯಗಳು ಸಂಪೂರ್ಣವಾಗಿ ವಿಭಿನ್ನವಾಗಿರುವುದರಿಂದ ನ್ಯಾಯಾಲಯವು ಈ ಹೊಣೆಯನ್ನು ಹೊತ್ತಿಕೊಳ್ಳುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.