ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ, ನಾಳೆಯಿಂದ ಎಲ್ಲಾ ಬಾರ್, ಲಾಡ್ಜ್ ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ…

182
firstsuddi

ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ಭರ್ಜರಿ ಆದಾಯ ಬರುತ್ತಿದ್ದು , ಈ ನಡುವೆ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನಾಳೆಯಿಂದ ರಾಜ್ಯದ ಎಲ್ಲಾ ಪಬ್, ಲಾಡ್ಜ್, ಬಾರ್, ಹಾಗೂ ಕ್ಲಬ್‍ಗಳಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ನೀಡಿದೆ. ಈ ಮೊದಲು ಎಂಎಸ್ಐಎಲ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದು ಅಬಕಾರಿ ಸಚಿವ ಹೆಚ್ ನಾಗೇಶ್ ತಿಳಿಸಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ಪಬ್ ಮತ್ತು ಕ್ಲಬ್, ಎಲ್ಲಾ ಮದ್ಯದಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಕಂಡಿಷನ್ಸ್ ಹಾಕಿದ್ದು, ಎಂಆರ್ ಪಿ ಬೆಲೆಯಲ್ಲೇ ಮಾರಬೇಕು. ಇಲ್ಲದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಮಾತ್ರ ಮಾರಾಟ ಮಾಡಬೇಕು ಎಂದು ಹೇಳಿದ್ದಾರೆ. ವರ್ಷಕ್ಕೆ ಅಬಕಾರಿ ಆದಾಯ ಸರ್ಕಾರಕ್ಕೆ 25 ಸಾವಿರ ಕೋಟಿ ಬರಲಿದೆ. ಈ ವರ್ಷ 2500 ಕೋಟಿ ಹೆಚ್ಚಾಗಲಿದೆ. 22,500 ಕೋಟಿ ಆದಾಯಕ್ಕೆ ಹೆಚ್ಚುವರಿಯಾಗಿ 2500 ಕೋಟಿ ಸಿಗಲಿದೆ ಎಂದು ನಾಗೇಶ್ ಹೇಳಿದರು. ಸುಪ್ರೀಂ ಕೋರ್ಟ್‌ ನೀಡಿದ ಆದೇಶ ನೋಡಿಲ್ಲ. ಆನ್ ಲೈನ್ ಮಾರಾಟಕ್ಕೆ ಅವಕಾಶ ನೀಡಿದರೆ ತಪ್ಪಿಲ್ಲ. ಮೊದಲಿಂದಲೂ ಆ ಬಗ್ಗೆ ಚರ್ಚೆ ಇತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.