ಮಧ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ…

246
firstsuddi

ವಿಜಯಪುರ : ಮಧ್ಯಪಾನ ಮಾಡಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಗನೊಬ್ಬ ತನ್ನ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಡಚಣ ತಾಲ್ಲೂಕಿನ ಮಹಾರಾಷ್ಟ್ರ ಗಡಿಯ ಟಾಕಳಿ ಗ್ರಾಮದಲ್ಲಿ ನಡೆದಿದೆ. ಅಣ್ಣಪ್ಪ ತೊರವಿ(58) ಮೃತ ದುರ್ಧೈವಿ ಎನ್ನಲಾಗಿದ್ದು, ಮಗ ಸಂಜೀವ ತೊರವಿ(38) ಅವರು ತನ್ನ ತಂದೆ ಅಣ್ಣಪ್ಪ ಅವರ ಬಳಿ ನಿನ್ನೆ ಬೆಳಿಗ್ಗೆ ಮಧ್ಯಪಾನ ಮಾಡಲೆಂದು ಹಣವನ್ನು ಕೇಳಿದ್ದಾರೆ. ಇದರಿಂದ ಕೋಪಗೊಂಡ ತಂದೆ ಹಣವನ್ನು ಕೊಡುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಧ್ಯದ ಅಮಲಿನಲ್ಲಿದ್ದ ಮಗ ಸಂಜೀವ ಅವರು ಮನೆಯಲ್ಲಿದ್ದ ಕೊಡಲಿಯಿಂದ ಅಪ್ಪನ ಕುತ್ತಿಗೆಯನ್ನು ಕಡಿದು ಹತ್ಯೆ ಮಾಡಿದ್ದು, ಸ್ಥಳಕ್ಕೆ ಚಡಚಣ ಠಾಣಾ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.