ಮಧ್ಯಪ್ರದೇಶ : ಮತ್ತೆ ಲಾಕ್ ಡೌನ್ – ಸಿಎಂ ಘೋಷಣೆ.!

93
firstsuddi

ಮಧ್ಯಪ್ರದೇಶ : ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನಲೆ ರಾಜ್ಯದ ಪ್ರಮುಖ ನಗರ ಪ್ರದೇಶಗಳಲ್ಲಿ ಲಾಕ್ ಡೌನ್ ಮರುಜಾರಿ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ನಾಳೆ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದು, ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಸೆಂಟರ್ ಗಳನ್ನು ಎಲ್ಲಾ ಜಿಲ್ಲೆಗಳಲ್ಲೂ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.