ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊರೊನಾ ಸೋಂಕು ದೃಢ…

177
firstsuddi

ಭೋಪಾಲ್ : ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಶಿವರಾಜ್ ಸಿಂಗ್ ಚೌಹಾಣ್ ಅವರೇ ತಮ್ಮ ಟ್ವಿಟರ್ ಖಾತೆಯ ಮೂಲಕ ಸ್ಪಷ್ಟನೆ ನೀಡಿದ್ದು, ನನಗೆ ಕೋವಿಡ್ ಲಕ್ಷಣಗಳು ಕಂಡು ಬಂದಿದ್ದರಿಂದ ನಾನು ಕೊರೊನಾ ಪರೀಕ್ಷೆ ಮಾಡಿಸಿದ್ದೆ. ಈಗಾ ನನ್ನ ವರದಿ ಪಾಸಿಟಿವ್ ಬಂದಿದೆ. ನನ್ನೊಂದಿಗೆ ಕಳೆದ 10 ದಿನಗಳಿಂದ ಸಂಪರ್ಕದಲ್ಲಿದ್ದ ಎಲ್ಲರೂ ಕ್ವಾರಂಟೈನ್‍ನಲ್ಲಿದ್ದು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.