ಬೆಂಗಳೂರು : ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ನಾನು ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳತ್ತಿಲ್ಲ. ಅಭಿಮಾನಿಗಳಿಗೆ ತಮ್ಮ ಮನೆಯ ಬಳಿ ಬಾರದಂತೆ ನಿನ್ನೆ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಮನವಿ ಮಾಡಿಕೊಂಡಿದ್ದರೂ ಕೂಡಾ ಅಭಿಮಾನಿಗಳು ಸುದೀಪ್ ಅವರ ಪುಟ್ಟೇನಹಳ್ಳಿ ನಿವಾಸದ ಬಳಿ ಗುಂಪು ಸೇರಿದ್ದರು. ಕೂಡಲೇ ಪೊಲೀಸರು ಅಭಿಮಾನಿಗಳಿಗೆ ಲಾಠಿ ಏಟು ನೀಡಿ ಗುಂಪನ್ನು ಚದುರಿಸಿದ್ದಾರೆ. ಸುದೀಪ್ ಅವರು ತಮ್ಮ ಹುಟ್ಟುಹಬ್ಬದ ಹಿನ್ನೆಲೆ, ನಿನ್ನೆಯೇ ಸಿದ್ಧಗಂಗಾ ಮಠಕ್ಕೆ ತೆರಳಿ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದರು.










