ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸಾವು…

200
firstsuddi

ಕೊಪ್ಪಳ : ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಯಲಮಗೇರಾ ಗ್ರಾಮದಲ್ಲಿ ನಡೆದಿದೆ. ಸುಜಾತಾ(22), ಅಮರೇಶ್(18), ಹಾಗೂ ಗವಿಸಿದ್ದಪ್ಪ(15) ಮೃತ ದುರ್ದೈವಿಗಳು. ತಂದೆ ಮಕ್ಕಳು ನಿನ್ನೆ ರಾತ್ರಿ ಮಲಗಿದ್ದ ವೇಳೆ ಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಅಕ್ಕ ಹಾಗೂ ಇಬ್ಬರು ತಮ್ಮಂದಿರು ಸ್ಥಳದಲ್ಲೇ ಮೃತಪಟ್ಟಿದ್ದು, ಅದೃಷ್ಟಾವಶಾತ್ ತಂದೆ ಸೋಮಣ್ಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.