ಬೆಂಗಳೂರು : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮಳೆ ಹಾನಿಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ.
ಸಿಎಂ ಭೇಟಿ ವೇಳೆ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತ, ಸ್ಥಳೀಯ ಶಾಸಕರಾದ ಸತೀಶ್ ರೆಡ್ಡಿ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಳೆದ ಕೆಲ ದಿನಗಳಿಂದ ನಗರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಾಲ್ಕು ವರ್ಷಗಳ ಬಳಿಕ ಅತ್ಯಧಿಕ ಮಳೆ ದಾಖಲಾಗಿದೆ. ನಿನ್ನೆ ವಾಡಿಕೆಗಿಂತ ಶೇ.60ರಷ್ಟು ಹೆಚ್ಚು ಮಳೆ ಸುರಿದಿತ್ತು.










