ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲು ಸೂಚನೆ : ಸಿಎಂ ಬೊಮ್ಮಾಯಿ.

61
firstsuddi

ಬೆಂಗಳೂರು : ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಕೊಡಲು ಸೂಚಿಸಿದ್ದೇನೆ. ಉತ್ತರ ಕರ್ನಾಟಕ ಭಾಗದಲ್ಲಿಯೂ ಇದೇ ಸೂಚನೆ ನೀಡಿದ್ದೇನೆ. ಮೈಸೂರು ಡಿಸಿಗೂ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆರೆ ಕಟ್ಟೆ ಒಡೆಯುವ ಸಾಧ್ಯತೆ ಇರುವ ಕಡೆ ಸುರಕ್ಷಿತ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. 900 ಕೋಟಿ ಹಣ ರಾಜ್ಯದ ಎಲ್ಲಾ ಡಿಸಿಗಳ ಅಕೌಂಟ್ ನಲ್ಲಿದೆ. ಎಲ್ಲೆಲ್ಲಿ ಜನವಸತಿಗೆ ನೀರು ಹೋಗಿದೆಯೋ, ಅಲ್ಲಿ ತಾತ್ಕಾಲಿಕ ಆಶ್ರಯಕ್ಕೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದೇನೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದರು.

16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಳೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಲ್ಲಿ ನೀರು ನಿಂತಿರೋದನ್ನ ಗಮನಿಸಿ, ಅಲ್ಲಿನ ಎಸ್ ಪಿಗಳಿಗೆ ಸೂಚನೆ ನೀಡಿದ್ದೇನೆ. ಪರ್ಯಾಯ ಮಾರ್ಗವನ್ನು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ದೆಹಲಿಯಿಂದ ವಾಪಸಾಗಿರುವ ಪಕ್ಷದ ಹಿರಿಯ ನಾಯಕರಾದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದೇನೆ. ಪ್ರಮುಖವಾಗಿ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿಗಳು 2ನೇ ತಾರೀಖು ಮಂಗಳೂರಿಗೆ ಬರುತ್ತಿದ್ದಾರೆ. ಪ್ರಧಾನಿ ಅವರ ಕಾರ್ಯಕ್ರಮದ ಯಶಸ್ಸು ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಸೆಪ್ಟೆಂಬರ್ ಅಕ್ಟೋಬರ್ ನಲ್ಲಿ ಜನ ಸಂಪರ್ಕ ಪ್ರವಾಸ, ಆರು ಕಡೆ ರ್ಯಾಲಿ ಹಾಗೂ ನಾವು ಯಡಿಯೂರಪ್ಪ, ಕಟೀಲ್ ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ರಾಜ್ಯಮಟ್ಟದ ಸಭೆಯನ್ನು ಮಾಡಿ, ಸೆಪ್ಟೆಂಬರ್ ಅಕ್ಟೋಬರ್ ತಿಂಗಳಿನ ಪ್ರವಾಸದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಸೆಪ್ಟೆಂಬರ್ 8 ರಂದು ಜನೋತ್ಸವದ ಬಗ್ಗೆ ಬಿಎಸ್ ವೈ ಅವರಿಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.