ಮಳೆರಾಯನ ಆರ್ಭಟ: ಮನೆಯ ಛಾವಣಿ ಕುಸಿದು ವೃದ್ಧೆ ಸಾವು…

56
firstsuddi

ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಶಿವಮ್ಮ ಸಾವಳಗಿ (60) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಮೇಲ್ಛಾವಣಿ ಬಿದ್ದು ಅವಘಡ ಸಂಭವಿಸಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಳೆದ ಜುಲೈ 1 ರಿಂದ ಈ ವರೆಗೆ ಜಿಲ್ಲೆಯಾದ್ಯಂತ ವಾಡಿಕೆಗಿಂತ ಕೊಂಚ ಜಾಸ್ತಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಸಹಜವಾಗಿ 16.2 ಮೀ. ಮೀಟರ್ ಮಳೆಯಾಗಬೇಕಾಗಿತ್ತು. ಆದರೆ 42.8 ಮೀ.ಮೀಟರ್ ಮಳೆಯಾಗಿದೆ. ಒಟ್ಟು 20 ಮನೆಗಳು ಭಾಗಶ: ಹಾನಿಗೊಳಗಾಗಿವೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲಾನ್ ತಿಳಿಸಿದ್ದಾರೆ. ಸದ್ಯ ಶಾಲೆ, ಕಾಲೇಜ್‌ಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.